ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಸುಳಿವು ಕೊಟ್ಟ CCTV – ಕೇರಳದಲ್ಲಿ ಸಿಕ್ಕಿಬಿದ್ದ ಬೀದಿ ಕಾಮಣ್ಣ!

ಎಪ್ರಿಲ್ 14, 2025 - 12:00
 0  13
ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಸುಳಿವು ಕೊಟ್ಟ CCTV – ಕೇರಳದಲ್ಲಿ ಸಿಕ್ಕಿಬಿದ್ದ ಬೀದಿ ಕಾಮಣ್ಣ!

ಬೆಂಗಳೂರು: ಬೆಂಗಳೂರು: ಸುದ್ದಗುಂಟೆಪಾಳ್ಯ ಬಳಿಯ ಭಾರತಿ ಲೇಔಟ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಸಂತೋಷ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೃತ್ಯದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಸದ್ದುಗುಂಟೆಪಾಳ್ಯ ಪೊಲೀಸರ ತಂಡ ಆರೋಪಿ ಪತ್ತೆಗಾಗಿ ಸುಮಾರು 700ಕ್ಕೂ ಅಧಿಕ ಸಿಸಿಟಿವಿ ದೃಶ್ಯಗಳನ್ನು ಜಾಲಾಡಿತ್ತು.

ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ.

ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡ ಪರಿಣಾಮ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದ. ಆರೋಪಿಯ ವಿಕೃತಿ ಘಟನಾ ಸ್ಥಳದ ಪಕ್ಕದಲ್ಲಿದ್ದ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ಯಾವುದೇ ದೂರು ನೀಡಿರಲಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಅನ್ವಯ ಸದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow