ರನ್ಯಾ ಕೇಸ್ ಹಿಂದೆ ದೊಡ್ಡ ಜಾಲ: ಸಚಿವರು, ಪೊಲೀಸರ ನಂಟಿನ ಬಗ್ಗೆ ಯತ್ನಾಳ್ ಸ್ಫೋಟಕ ಮಾತು

ಮಾರ್ಚ್ 16, 2025 - 16:23
 0  9
ರನ್ಯಾ ಕೇಸ್ ಹಿಂದೆ ದೊಡ್ಡ ಜಾಲ: ಸಚಿವರು, ಪೊಲೀಸರ ನಂಟಿನ ಬಗ್ಗೆ ಯತ್ನಾಳ್ ಸ್ಫೋಟಕ ಮಾತು

ದುಬೈನಿಂದ ಕೋಟಿ, ಕೋಟಿ ಬೆಲೆ ಬಾಳುವ ಚಿನ್ನ ಕಳ್ಳ ಸಾಗಾಟದ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. ಸದ್ಯ ಸ್ಮಗ್ಲಿಂಗ್ಕೇಸ್ನ್ನು ಮೂರು ಆಯಾಮಗಳಲ್ಲಿ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಅದು ಕೂಡ ಮೂರು ತನಿಖಾ ಸಂಸ್ಥೆಗಳಿಂದ. ಮೊದಲಿಗೆ ಡಿಆರ್​​ ಅಧಿಕಾರಿಗಳಿಂದ ಸ್ಮಗ್ಲಿಂಗ್ ಬಗ್ಗೆ ತನಿಖೆ ಶುರುವಾಗಿದೆ

ಇನ್ನೂ ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ ರಹಸ್ಯ ಎಂದರು. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ರನ್ಯಾ ಪ್ರಕರಣದಲ್ಲಿ ಕೇಂದ್ರದ ಕಸ್ಟಮ್ಸ್ ಆಧಿಕಾರಿಗಳೂ ತಪ್ಪು ಮಾಡಿದ್ದಾರೆಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದರು. ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಯಾರು ತಪ್ಪು ಮಾಡಿದ್ದರೂ ಅದು ತಪ್ಪೇ. ಕಸ್ಟಮ್ಸ್ ಆಧಿಕಾರಿಗಳು ತಪ್ಪು ಮಾಡಿದ್ದರೆ ನಾವು ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳತ್ತಿಲ್ಲ. ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪೇ ಎಂದರು.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow