ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ರೆ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ: ಭಾರತಕ್ಕೆ ಮತ್ತೆ ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್: ದೀಪಾವಳಿಯಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವವರೆಗೂ ಭಾರತವು ಭಾರೀ ಸುಂಕ ಪಾವತಿಸಬೇಕಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ, ಇನ್ನಷ್ಟು ಸುಂಕ ವಿಧಿಸಲಾಗುವುದು ಎಂದು ಅವರು ಪುನರುಚ್ಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಭರವಸೆ ನೀಡಿದ್ದಾರೆ ಹಾಗೂ ಈ ವಿಷಯದ ಕುರಿತು ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದರು. ಆದರೆ ವಿದೇಶಾಂಗ ಸಚಿವಾಲಯ (ಎಂಇಎ) ಈ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಟ್ರಂಪ್ ಮತ್ತು ಮೋದಿ ನಡುವಿನಲ್ಲಿ ಯಾವುದೇ ಸಂಭಾಷಣೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.
ಒನ್‌ಫೋರ್ಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಭಾರತ ನಮ್ಮ ಷರತ್ತುಗಳಿಗೆ ಒಪ್ಪದಿದ್ದರೆ, ಶೇ.50 ರಷ್ಟು ಸುಂಕ ವಿಧಿಸಲಾಗುವುದು” ಎಂದು ಎಚ್ಚರಿಸಿದರು. ಇದು ಭಾರತದ ಮೇಲೆ ವಿಧಿಸಲಾದ ಅತ್ಯಧಿಕ ಸುಂಕಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ.
ಭಾರತದ ರಷ್ಯಾದ ತೈಲ ಖರೀದಿ ಉಕ್ರೇನ್ ಯುದ್ಧದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಪಾಲ್ಗೊಳ್ಳುವಿಕೆಗೆ ಪರೋಕ್ಷವಾಗಿ ಹಣಕಾಸು ಸಹಕಾರ ನೀಡುತ್ತಿದೆ ಎಂದು ಟ್ರಂಪ್ ವಾದಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?