ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಸಂಕ್ರಾಂತಿವರೆಗೆ ಯಾವ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಕೋಡಿಮಠ ಸ್ವಾಮೀಜಿ ಅವರು ಮತ್ತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿಂದು ಮಾತನಾಡಿದ ಅವರು, ಭವಿಷ್ಯದಲ್ಲಿ ಎರಡು ಒಂದು ಯುಗಾದಿ ಭವಿಷ್ಯ,ಇನ್ನೊಂದು ಸಂಕ್ರಾಂತಿ ಭವಿಷ್ಯ. ಯುಗಾ ಭವಿಷ್ಯ ಪ್ರಕೃತಿಗೆ ಸಂಬಂಧಿಸಿದ್ದು.
ಸಂಕ್ರಾಂತಿ ಭವಿಷ್ಯ ರಾಜರಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಹಡಗಿನಲ್ಲಿ ಬರುವಂತವರಿಗೆ ಬರುತ್ತದೆ. ಸಂಕ್ರಾಂತಿವರೆಗೆ ಯಾವ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ. ಸಂಗಮೇಶ ನಲಿವನೆ, ಆದರೆ ಒಳ ಅಡ್ಡ ಬಂದಿದೆ ಬದಲಾವಣೆ ವಿಚಾರದಲ್ಲಿ.
ಹೊಳೆಯನ್ನು ಈಜಿದರೆ ಬದಲಾವಣೆ ಆಗಬಹುದು. ಆ ಶಕ್ತಿ ಇದ್ರೆ. ಈ ಹಿಂದೆಯೇ ಹೇಳಿದ್ದೆ ಹಾಲುಮತದವರಿಗೆ ಅಧಿಕಾರ ಬಂದರೆ ಬಿಡಿಸಿಕೊಳ್ಳೋದು ಕಷ್ಟ ಅವರಾಗಿಯೇ ಬಿಡಬೇಕು. ಯಾಕೆಂದರೆ ವಿಜಯನಗರ ಸಾಮ್ರಾಜ್ಯ ಹಕ್ಕಬುಕ್ಕರು ಕಟ್ಟಿದ್ದು.
ಇವತ್ತು ಅದೇ ಚಿಹ್ನೆ ಇರೋದು ಮೈಸೂರು ದಸರಾ ಅದೇ ಚಿಹ್ನೆಯಲ್ಲಿ ನಡೆಯುತ್ತಿರುವುದು. ಹಾಲು ಕೆಟ್ಟರು ಹಾಲುಮತ ಕೆಡುವುದಿಲ್ಲ. ಆಂತವರ ಕೈಲಿ ಅಧಿಕಾರ ಸಿಕ್ಕಿರುವುದರಿಂದ ಬಿಡಿಸೋದು ಕಷ್ಟ. ಅವರಾಗಿಯೇ ಬಿಟ್ರೆ ನಿಮಗೆ ಸಿಗುತ್ತದೆ ಎಂದು ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದರು.
ನಿಮ್ಮ ಪ್ರತಿಕ್ರಿಯೆ ಏನು?






