ರಾಜ್ಯ - ಕೇಂದ್ರ ಸರ್ಕಾರಗಳ ನಡುವೆ ಹಣಕಾಸು ಹಂಚಿಕೆಯಲ್ಲಿ ಸಮಸ್ಯೆಗಳಿವೆ: ಎಂ. ಬಿ. ಪಾಟೀಲ್
ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಹಣಕಾಸು ಹಂಚಿಕೆಯಲ್ಲಿ ಸಮಸ್ಯೆಗಳಿವೆ ಎಂದು ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ. ಮೆಟ್ರೋ ಯೋಜನೆ ಕುರಿತು ಕೇಂದ್ರ ಸರ್ಕಾರ ನೀಡುವ ಕ್ರೆಡಿಟ್ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ಅವರು "ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ಹೊರುತ್ತದೆ, ಆದರೆ ರಾಜ್ಯಕ್ಕೆ ಕೇಂದ್ರದಿಂದ ಸರಿಯಾದ ಹಣ ಬರುತ್ತಿಲ್ಲ" ಎಂದು ಟೀಕೆ ಮಾಡಿದ್ದಾರೆ.
ಮೆಟ್ರೋ ಕಾಮಗಾರಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ನಡೆದಿದ್ದು, ಕೇಂದ್ರ ಸರ್ಕಾರ ಮೊದಲೇ ರಾಜ್ಯದ 62, 63 ಸಾವಿರ ಕೋಟಿ ರೂ. ಮೊದಲು ನೀಡಬೇಕಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಕಾರ್ಯಚಟುವಳಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಕಲಿ ಮತದಾರರ ಕುರಿತು ಮಾಹಿತಿ ಕೇಳಿರುವುದನ್ನು ಒತ್ತಿ, ಈ ವಿಷಯದಲ್ಲಿ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?