ರಾತ್ರಿ ಸುರಿದ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತ: ಈ ಮಾರ್ಗಗಳಲ್ಲಿ ನಿಧಾನಗತಿಯ ಸಂಚಾರ
ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ನಗರದಲ್ಲಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ವೀರಸಂದ್ರ ಬಳಿ ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿ ನೀರಿನಲ್ಲಿ ಮುಳುಗಿದ್ದು, ವಾಹನ ಸಂಚಾಲಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಳೆ ನೀರು ಹೊರಹೋಗಲು ಸರಿಯಾದ ವ್ಯವಸ್ಥೆಯಿಲ್ಲದ ಕಾರಣ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.
ಜಲಾವೃತ ಪ್ರದೇಶಗಳು
ಬೆಂಗಳೂರು ಸಂಚಾರ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಮೈಸೂರು ರಸ್ತೆ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ, ಬಿಳೇಕಲ್ಲಳ್ಳಿ ಸಿಗ್ನಲ್, ಜಿ.ಡಿ. ಮರ ಸಿಗ್ನಲ್, ಸಾಗರ್ ಜಂಕ್ಷನ್, ಡೈರಿ ಸಿಗ್ನಲ್, ದೊಡ್ಡ ಮರ, ಚೊಕ್ಕಸಂದ್ರ, ರಾಯಸಂದ್ರ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದು, ನಿಧಾನ ಗತಿಯ ಸಂಚಾರ ನಡೆಯುತ್ತಿದೆ.
ಪೊಲೀಸರು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಅತಿ ಅವಶ್ಯಕತೆ ಇದ್ದಲ್ಲಿ ಮಾತ್ರ ಪ್ರಯಾಣ ಮಾಡುವಂತೆ ಸಲಹೆ ನೀಡಿದ್ದಾರೆ.. ಮೈಸೂರು ರಸ್ತೆಯ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ ಕಡೆಗೆ,ಬಿಳೇಕಲ್ಲಳ್ಳಿ ಸಿಗ್ನಲ್ ಗೆ ಜಿ.ಡಿ.ಮರ ಸಿಗ್ನಲ್ ಕಡೆಗೆ ಮಳೆ ನೀರು ರಸ್ತೆಯಲ್ಲಿ ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?