ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸಿಗೆ ಅತ್ಯುತ್ತಮ ನಟ

ಆಗಸ್ಟ್ 1, 2025 - 20:39
 0  12
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸಿಗೆ ಅತ್ಯುತ್ತಮ ನಟ

2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ. ನವ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಅನೌನ್ಸ್ ಮಾಡಲಾಗುತ್ತಿದೆ.  ‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್  ಅವರು ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿ ಕೂಡ ಅತ್ಯುತ್ತಮ ನಟ  ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಾರುಖ್ ಖಾನ್, ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿ ಮುಂತಾದವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಶಾರುಖ್ ಖಾನ್ ಅವರು ಕಳೆದ 33 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಆದರೆ ಅವರಿಗೆ ಈವರೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ಅತ್ಯುತ್ತಮ ನಟ ನ್ಯಾಷನಲ್ ಅವಾರ್ಡ್ ಪ್ರಡೆದುಕೊಂಡಿದ್ದಾರೆ. ‘ಜವಾನ್’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಬಾಕ್ಸ್ ಆಫೀಸ್​​ನಲ್ಲಿ ಕೂಡ ಈ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗಿತ್ತು.

2023ನೇ ಸಾಲಿನ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಶಾರುಖ್ ಖಾನ್ ಮತ್ತು ವಿಕ್ರಾಂತ್ ಮಾಸಿ ಅವರು ಹಂಚಿಕೊಂಡಿದ್ದಾರೆ. ‘12th ಫೇಲ್’ ಚಿತ್ರದಲ್ಲಿನ ಅಭಿನಯಕ್ಕಾಗಿ ವಿಕ್ರಾಂತ್ ಮಾಸಿ ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಗಿದೆ. ನೈಜ ಘಟನೆ ಆಧಾರಿತ ಕಥೆಯನ್ನು ‘12th ಫೇಲ್’ ಸಿನಿಮಾ ಹೊಂದಿದೆ. ಈ ಚಿತ್ರದಲ್ಲಿ ಐಪಿಎಸ್​ ಅಧಿಕಾರಿ ಮನೋಜ್ ಕುಮಾರ್ ಶರ್ಮಾ ಅವರ ಪಾತ್ರವನ್ನು ವಿಕ್ರಾಂತ್ ಮಾಸಿ ಮಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow