ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಕೇಸ್: ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್!

ಬೆಳಗಾವಿ: ಐದು ಕೋಟಿ ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಅರೆಸ್ಟ್ ಮಾಡಲಾಗಿದೆ. ಘಟಪ್ರಭಾ ಪೊಲೀಸರಿಂದ ಮಂಜುಳಾ ರಾಮಗನಟ್ಟಿ ಬಂಧನ ಮಾಡಲಾಗಿದ್ದು, ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.
ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ ಪೊಲೀಸರ ನಿದ್ದೆಗೆಡಸಿತ್ತು.
ಪ್ರಕರಣ ದಾಖಲಾದ ಕೇವಲ 24ಗಂಟೆಯಲ್ಲಿ ಘಟಪ್ರಭಾ ಪೊಲೀಸರು ಪ್ರಕರಣವನ್ನ ಭೇದಿಸಿದ್ದು ಐವರು ಜನ ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಉದ್ಯಮಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






