ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಮತ್ತೆ ಜೈಲು ವಾಸ: ದರ್ಶನ್ ಅರೆಸ್ಟ್!

ಆಗಸ್ಟ್ 14, 2025 - 16:22
 0  17
ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಮತ್ತೆ ಜೈಲು ವಾಸ: ದರ್ಶನ್ ಅರೆಸ್ಟ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಅಪಾರ್ಟ್​ಮೆಂಟ್​ಗೆ ದರ್ಶನ್ ಬಂದರು.

ಪತ್ನಿ ವಿಜಯಲಕ್ಷ್ಮೀಯ ಫ್ಲ್ಯಾಟ್​ನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ ಜಾತ್ರೆಯಲ್ಲಿ ಭಾಗಿಯಾಗಿ ಫಾರ್ಮ್‌ಹೌಸ್‌ಗೆ ಕುದುರೆ ಖರೀದಿಸಲು ಅವರು ತೆರಳಿದ್ದರು.

ಜಾತ್ರೆಯಲ್ಲಿ ಎರಡು ಕುದುರೆಗಳನ್ನು ಫೈನಲ್‌ ಮಾಡಿದ್ದರು. ಜಾತ್ರೆಯಲ್ಲಿರುವಾಗಲೇ ಸ್ನೇಹಿತ ಧನ್ವೀರ್ ದೂರವಾಣಿ ಕರೆ ಮಾಡಿ ಸುಪ್ರೀಂಕೋರ್ಟ್‌ನ ತೀರ್ಪಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ದರ್ಶನ್ ಅವರು ಬೆಂಗಳೂರಿಗೆ ಆಗಮಿಸಿದರು. ದರ್ಶನ್ ಮನೆಗೆ ಬರುತ್ತಿದ್ದಂತೆ ಬಂಧಿಸಿದ ಪೊಲೀಸರು. ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow