ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ: 35 ಯುವತಿಯರು ಸೇರಿ 115 ಜನರು ವಶಕ್ಕೆ.!
ರಾಮನಗರ: ನಗರದ ಹೊರವಲಯದ ದೇವಿಗೆರೆ ಕ್ರಾಸ್ ಸಮೀಪದ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಎಸ್‌ಪಿ ಶ್ರೀನಿವಾಸ್ ಗೌಡ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಪಾರ್ಟಿಯಲ್ಲಿ ಭಾಗವಹಿಸಿದ್ದ 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು ಬಂಧಿಸಲಾಗಿದೆ.
ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಂಡಿದ್ದಾರೆ. ಪಾರ್ಟಿ ವೇಳೆ ಮಾದಕ ವಸ್ತುಗಳ ಬಳಕೆ ನಡೆದಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಬಂಧಿತರನ್ನು ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ದಾಳಿ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳು ಮತ್ತು ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿದಾಗ, ಪೊಲೀಸರು ಅದನ್ನು ತಡೆದಿದ್ದಾರೆ. ಈ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?