ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ! ಸಂಪೂರ್ಣ ನಜ್ಜುಗುಜ್ಜಾದ ಕಾರು - ಆಸ್ಪತ್ರೆಗೆ ದಾಖಲಾದ ಸಚಿವೆ

ಜನವರಿ 14, 2025 - 10:34
 0  20
ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ! ಸಂಪೂರ್ಣ ನಜ್ಜುಗುಜ್ಜಾದ ಕಾರು - ಆಸ್ಪತ್ರೆಗೆ ದಾಖಲಾದ ಸಚಿವೆ

ಬೆಳಗಾವಿ: ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ  ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow