ಲವರ್ ಕಿರುಕುಳ: ಮನನೊಂದು ಯುವಕ ಸೂಸೈಡ್.. ಸೆಲ್ಫಿ ವಿಡಿಯೋದಲ್ಲಿ ಏನಿದೆ?

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.
ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






