ವಂಚನೆ ಪ್ರಕರಣ: ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್!
1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮಾಣಿಕ್ಯ’, ಅಪ್ಪು ನಟಿಸಿದ್ದ ‘ಅಂಜನಿಪುತ್ರ’ ಸೇರಿದಂತೆ ಹಲವು ಬಿಗ್ ಬಜೆಟ್ ಕನ್ನಡ ನಿರ್ಮಾಪಕ ಎಂ ಎನ್ ಕುಮಾರ್ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡದ ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ (Hassan) ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?