ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ: ಬಿ.ವೈ ವಿಜಯೇಂದ್ರ

ನವೆಂಬರ್ 3, 2024 - 14:00
 0  14
ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ: ಬಿ.ವೈ ವಿಜಯೇಂದ್ರ

 

ಚಿತ್ರದುರ್ಗ:  ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ.

ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ. ಅವರನ್ನ ಗಡಿಪಾರು ಮಾಡಿದ್ರೆ ಈ ರಾಜ್ಯಕ್ಕೆ ಒಳಿತು ಎಂದಿದ್ದಾರೆ. 

ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ಧರಾಮಯ್ಯ ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್‌ ಹಾಕಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow