ವಾಹನ ಸವಾರರಿಗೆ ಗುಡ್ ನ್ಯೂಸ್: ನ. 20ರ ವರಗೆ HSRP ನಂಬರ್ ಪ್ಲೇಟ್ ವಿಸ್ತರಣೆ

ಬೆಂಗಳೂರು: ಈಗಾಗಲೇ ಕರ್ನಾಟಕದಲ್ಲಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 15ಕ್ಕೆ ಡೆಡ್ಲೈನ್ ಕೊನೆಗೊಂಡಿತ್ತು. ಇನ್ನು ಮುಂದೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಹೇಳಿತ್ತು. ಆದರೆ, ವಾಹನ ಮಾಲೀಕರಿಗೆ ಈಗ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ..
ಹೌದು ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






