ವಾಹನ ಸವಾರರಿಗೆ ಗುಡ್ ನ್ಯೂಸ್: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ!

ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ. ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. 2019ರ ಏಪ್ರಿಲ್ 1ರ ಹಿಂದಿನ ಎಲ್ಲ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೆ ಕಡ್ಡಾಯವಾಗಿದೆ.
ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್ಗಳನ್ನು ಅಳವಡಿಸಬೇಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






