ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ!

ನವೆಂಬರ್ 7, 2024 - 13:23
 0  15
ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯದಲ್ಲಿನ ವಾಹನಗಳಿಗೆ  ಇನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ಲ ಎಂದು ಯೋಚನೆ ಮಾಡುತ್ತಿದ್ದೀರಾ? ತಲೆಬಿಸಿ ಬೇಡ, ಈ ಸುದ್ದಿ ಓದಿ. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.

 ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ನವೆಂಬರ್ 30ರ ವರೆಗೆ ಮತ್ತೊಮ್ಮೆ ಗಡುವು ನೀಡಿದೆ. ಈ ದಿನಾಂಕದ ಒಳಗೆ ಮಾಲೀಕರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು. ಒಂದು ವೇಳೆ ಈ ದಿನಾಂಕದ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೇ ಮುಂದಿನ ತಿಂಗಳು ಅಂದರೆ ಡಿಸೆಂಬರ್ 1 ರಿಂದ ದಂಡ ವಿಧಿಸಲಾಗುತ್ತದೆ.

 1.90 ಕೋಟಿ ಹಳೆ ವಾಹನಗಳಲ್ಲಿ ಕೇವಲ 55 ಲಕ್ಷ ವಾಹನಗಳಿಗೆ ಮಾತ್ರ ಈ ನಂಬರ್ ಪ್ಲೇಟ್ ಅನ್ನು ಅಳವಡಿಸಲಾಗಿದೆ. ಇನ್ನುಳಿದವರು ಈ ನಂಬರ್ ಪ್ಲೇಟ್​ ಅನ್ನು ಹಾಕಿಸಿಲ್ಲ. ಹೀಗಾಗಿ ಸರ್ಕಾರ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶ ಕೊಟ್ಟಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲದಿದ್ದರೇ ಸರ್ಕಾರಕ್ಕೆ ದಂಡ ಕಟ್ಟಬೇಕಾಗುತ್ತದೆ.

 ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ವಾಹನಗಳಿಗೆ ಅಳವಡಿಸಿದರೆ, ಓನರ್​ಶಿಪ್ ಬದಲಾವಣೆ, ನಕಲಿ ಆರ್‌ಸಿ, ನಕಲಿ ವಿಮೆ, ವಿಳಾಸ ಬದಲಾವಣೆ ಸೇರಿದಂತೆ ಇನ್ನಿತರ ಕೆಲಸ ಸುಲಭವಾಗಿ ಮಾಡಬಹುದು. ಇದರ ಜೊತೆಗೆ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಈ ನಂಬರ್​ ಪ್ಲೇಟ್​ ಸಹಾಯಕ ಆಗುತ್ತದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow