ವಿಜಯಪುರದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ಸರ್ಕಾರಿ ಶಾಲೆ, ವಿದ್ಯಾರ್ಥಿಗಳು ಪರದಾಟ!

ವಿಜಯಪುರ:- ಧಾರಾಕಾರ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದ್ದು, ವಿದ್ಯಾರ್ಥಿಗಳು ಪರದಾಟ ನಡೆಸಿರುವ ಘಟನೆ ವಿಜಯಪುರದಲ್ಲಿ ಜರುಗಿದೆ.
ಹೌದು, ಭಾರೀ ಮಳೆಯಿಂದ ಜಿಲ್ಲೆಯ ತಿಕೋಟ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯೊಂದು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಶಾಲಾ ಆವರಣ ಕೆರೆಯಂತಾಗಿದ್ದು, ಕೊಠಡಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ನೀರು ಹೊರಹಾಕಲು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸದ್ಯ ನೀರಿನ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಇನ್ನೂ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






