ವಿದೇಶಿ ಲೀಗ್ʼನಲ್ಲಿ ಕಣಕ್ಕಿಳಿಯಲು ಸಜ್ಜಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್
ವಿದೇಶಿ ಲೀಗ್ನಲ್ಲಿ ಕಣಕ್ಕಿಳಿಯಲು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಜ್ಜಾಗಿದ್ದಾರೆ. ಒಪ್ಪಂದದಂತೆ ರವಿಚಂದ್ರನ್ ಅಶ್ವಿನ್ ಅವರು ಮುಂಬರುವ ಬಿಬಿಎಲ್ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿಯಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಷ್ ಲೀಗ್ 2025-26 ಡಿಸೆಂಬರ್ 14 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಮೂಲಕ ರವಿಚಂದ್ರನ್ ಅಶ್ವಿನ್ ಹೊಸ ಇನಿಂಗ್ಸ್ ಆರಂಭಿಸಲಿರುವುದನ್ನು ನಿರೀಕ್ಷಿಸಬಹುದು. ಇನ್ನು ಸಿಡ್ನಿ ಥಂಡರ್ ತಂಡದಲ್ಲಿ ಪಾಕಿಸ್ತಾನದ ಆಲ್ರೌಂಡರ್ ಶಾದಾಬ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ
ಹೀಗಾಗಿ ಬಿಗ್ ಬ್ಯಾಷ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕ್ ಆಟಗಾರ ಜೊತೆಯಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. 2009 ರಲ್ಲಿ ಐಪಿಎಲ್ ಕೆರಿಯರ್ ಆರಂಭಿಸಿದ್ದ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಕಳೆದ ಸೀಸನ್ ಮೂಲಕ ಸಿಎಸ್ಕೆ ತಂಡಕ್ಕೆ ಮರಳಿದ್ದರು. ಆದರೆ ಈ ಬಾರಿಯ ಟೂರ್ನಿ ಮುಕ್ತಾಯದೊಂದಿಗೆ ರವಿಚಂದ್ರನ್ ಅಶ್ವಿನ್ ಐಪಿಎಲ್ಗೆ ಗುಡ್ ಬೈ ಹೇಳಿದ್ದಾರೆ.
ಇನ್ನೂ ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸುವ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಗಾಗಿ ರವಿಚಂದ್ರನ್ ಅಶ್ವಿನ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಸಹ 120,000 ಯುಎಸ್ ಡಾಲರ್ ಮೂಲ ಬೆಲೆಯೊಂದಿಗೆ. ಅಂದರೆ ಅಶ್ವಿನ್ ಅವರ ಆರಂಭಿಕ ಹರಾಜು ಮೊತ್ತ ಬರೋಬ್ಬರಿ 1.06 ಕೋಟಿ ರೂ ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?