ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ದರ್ಶನ್-ವಿಜಯಲಕ್ಷ್ಮೀ : ಹ್ಯಾಪಿ ವೆಡ್ಡಿಂಗ್ ಆನಿವರ್ಸರಿ ಅಣ್ಣ ಅತ್ತಿಗೆ ಎಂದ ಫ್ಯಾನ್ಸ್!

ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವೇಳೆ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ನಲ್ಲಿ ಪತಿ ಜೊತೆಗಿನ ಸ್ಪೆಷಲ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಬಗೆಬಗೆಯ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ.
ಹೌದು 2003ರಲ್ಲಿ ಮೇ 19ರಂದು ಧರ್ಮಸ್ಥಳದಲ್ಲಿ ವಿಜಯಲಕ್ಷ್ಮಿಯೊಂದಿಗೆ ದರ್ಶನ್ ದಾಂಪತ್ಯ ಬದುಕಿಗೆ ಕಾಲಿಟ್ಟರು. ಸಾಕಷ್ಟು ಏಳು- ಬೀಳುಗಳನ್ನು ಕಂಡಿರುವ ಈ ಜೋಡಿ ಇದೀಗ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.
ಸದ್ಯ ಪತಿಯೊಂದಿಗೆ ಮುದ್ದಾಗಿ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ, ‘ಶಾಶ್ವತವಾಗಿ’ ಎಂದು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ. ಮದುವೆ ಆ್ಯನಿವರ್ಸರಿ ಖುಷಿಯಲ್ಲಿರುವ ಈ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






