ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಒಂದು ತಿಂಗಳ ಬಳಿಕ ಬಿಡುಗಡೆ ಭಾಗ್ಯ

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಹಿತ್, ಕಿರಣ್, ಮಂಜುನಾಥ್ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






