ಶೀಘ್ರದಲ್ಲೇ ಎಲ್ಲದಕ್ಕೂ ಕ್ಲಾರಿಟಿ ಕೊಡ್ತೀನಿ: ತಲೆಬುರುಡೆ ರಹಸ್ಯಕ್ಕೆ ಸಮೀರ್ ರಿಯಾಕ್ಟ್

ಸೆಪ್ಟೆಂಬರ್ 2, 2025 - 18:01
 0  18
ಶೀಘ್ರದಲ್ಲೇ ಎಲ್ಲದಕ್ಕೂ ಕ್ಲಾರಿಟಿ ಕೊಡ್ತೀನಿ: ತಲೆಬುರುಡೆ ರಹಸ್ಯಕ್ಕೆ ಸಮೀರ್ ರಿಯಾಕ್ಟ್

ಬೆಂಗಳೂರು:- ಶೀಘ್ರದಲ್ಲೇ ಎಲ್ಲದಕ್ಕೂ ಕ್ಲಾರಿಟಿ ಕೊಡ್ತೀನಿ ಎಂದು ತಲೆಬುರುಡೆ ರಹಸ್ಯಕ್ಕೆ ಸಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌ಐಟಿ ನೋಟಿಸ್ ವಿಚಾರವಾಗಿ ಪ್ರತಿಕ್ರಿಯಿಸಿ, ತಲೆಬುರುಡೆ ರಹಸ್ಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ.

ನನಗೆ ಈವರೆಗೂ ಎಸ್‌ಐಟಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣಾ ಪೊಲೀಸರಿಂದ  ನೋಟಿಸ್ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹೋಗಿದ್ದೆ. ಅದು ಮುಗಿದಿದೆ. ಎಲ್ಲ ವಿಷಯವಾಗಿ ಶೀಘ್ರದಲ್ಲೇ ಕ್ಲ್ಯಾರಿಟಿ ಕೊಡ್ತೀನಿ ಎಂದು ತಿಳಿಸಿದ್ದಾರೆ

ಇನ್ನೂ ವಿದೇಶದಿಂದ ಫಂಡಿಂಗ್ ಮಾಡಿದ್ದಾರೆ ಎಂಬ ವಿಚಾರವಾಗಿ ಮಾತನಾಡಿ, ನಾನು ಆ ವಿಚಾರವಾಗಿ ಮಾತಾನಾಡಲ್ಲ. ಪೊಲೀಸರ ತನಿಖೆ ನಡೆಯುತ್ತಿದೆ, ಬಳಿಕ ಸತ್ಯ ಹೊರಗಡೆ ಬರುತ್ತೆ. ಆರೋಪಗಳಿಗೆಲ್ಲಾ ಉತ್ತರ ಕೊಟ್ಟುಕೊಂಡು ಕೂರಕ್ಕೆ ಆಗಲ್ಲ. ಪೊಲೀಸರು ವಿಚಾರಣೆ ಮಾಡ್ತಿದ್ದಾರಲ್ಲ, ಅವರೇ ಎಲ್ಲವನ್ನೂ ಬಹಿರಂಗ ಮಾಡ್ತಾರೆ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow