ಸಂಡೂರಲ್ಲಿ ಅನ್ನಪೂರ್ಣ ತುಕಾರಂ ಗೆಲುವು: ಅಧಿಕೃತ ಘೋಷಣೆಯೊಂದೇ ಬಾಕಿ!

ಸಂಡೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪಚುನಾವಣೆ ನಡೆದಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
ಇದು ರೆಡ್ಡಿ-ರಾಮುಲುಗೆ ಬಿಗ್ ಶಾಕ್ ನೀಡಿದಂತಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ‘ಕೈ’ ನಾಯಕರ ಪರ ಜೈಕಾರ ಹಾಕಿದ್ದಾರೆ. 16 ಸುತ್ತುಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು ಸೋಲನ್ನು ಒಪ್ಪಿಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






