ಸಂಸದ ತೇಜಸ್ವಿ ಸೂರ್ಯ ಮದುವೆಗೆ ದಿನಾಂಕ ಫಿಕ್ಸ್.! ಆರತಕ್ಷತೆ ಎಲ್ಲಿ, ಯಾವಾಗ ನಡೆಯಲಿವೆ ಗೊತ್ತಾ..?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಆ ಮೂಲಕ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಎನಿಸಿಕೊಂಡಿದ್ದ ಯುವ ರಾಜಕಾರಣಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಅವರ ಮದುವೆ ಬಗ್ಗೆ ಈ ಹಿಂದೆ ಕೂಡ ಸುದ್ಧಿಗಳು ಹರಿದಾಡಿದ್ದವು. ಯಾವುದಕ್ಕೂ ತೇಜಸ್ವಿ ಸೂರ್ಯ ಅವರು ಮಾತನಾಡಿರಲಿಲ್ಲ. ಆದರೆ ಇದೀಗ ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಕುಟುಂಬದ ಜತೆ ವಿವಾಹ ಮಾತುಕತೆ ನಡೆಯುತ್ತಿದೆ ಎನ್ನುವುದು ಎಲ್ಲಾರಿಗೂ ಗೊತ್ತಿರುವ ವಿಚಾರ.
ಇದೀಗ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾ.5 ಮತ್ತು 6ರಂದು ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‍ನಲ್ಲಿ ಮದುವೆ ನಡೆಯಲಿದೆ. ಹೌದು ಮಾ.5ರ ಬುಧವಾರ ಸಂಜೆ ವರಪೂಜೆ ಕಾರ್ಯಕ್ರಮ ನಡೆಯಲಿದೆ. ಮಾ.6ರ ಗುರುವಾರ ಬೆಳಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ, ಮುಹೂರ್ತ ಹಾಗೂ ಲಾಜಾ ಹೋಮ ನಡೆಸಲಾಗುತ್ತದೆ.
ಬಳಿಕ ಅದೇ ದಿನ ಬೆಳಗ್ಗೆ 9:30 ರಿಂದ 10:15ರ ನಡುವಿನ ತುಲಾ ಲಗ್ನದಲ್ಲಿ ವಧು ಶಿವಶ್ರೀ ಸ್ಕಂದಪ್ರಸಾದ್‌ರನ್ನ ತೇಜಸ್ವಿ ಸೂರ್ಯ ವರಿಸಲಿದ್ದಾರೆ. ಇದಾದ ಮೇಲೆ ಅಂದೇ ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ, ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ಇರಲಿದೆ.
ಮದುವೆ ನಡೆದು ಎರಡು ದಿನಗಳ ಬಳಿಕ ಅಂದರೆ ಮಾ.9 ರಂದು ಭಾನುವಾರ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ. ಬೆಳಗ್ಗೆ 10:30 ರಿಂದ 1:30 ರವರೆಗೆ ರಿಸೆಪ್ಪನ್ ನಡೆಯಲಿದ್ದು, ಗಣ್ಯರು ಹಾಜರಾಗಲಿದ್ದಾರೆ.
ತೇಜಸ್ವಿ ಸೂರ್ಯ ಅವರ ಭಾವಿ ಪತ್ನಿ ಶಿವಶ್ರೀ ಅವರು ಚೆನ್ನೈ ಮೂಲದ ಹೆಸರಾಂತ ಗಾಯಕಿ, ಭರತನಾಟ್ಯ ಪ್ರವೀಣೆ ಹಾಗೂ ಬಿಟೆಕ್ ಪದವೀಧರೆಯಾಗಿದ್ದಾರೆ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಪ್ರಧಾನಿ ಮೋದಿಯವರ ಮೆಚ್ಚುಗೆಗೆ ಶಿವಶ್ರೀ ಪಾತ್ರರಾಗಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






