ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ: ಗುತ್ತಿಗೆದಾರ ಆತ್ಮಹತ್ಯೆ!

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಕೊಲೆ ಬೆದರಿಕೆ ಆರೋಪ ಹೊರಿಸಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದಲ್ಲಿ ನಡೆದಿದೆ. ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ 7 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಜು ಕಪನೂರು ವಿರುದ್ಧ ಆರೋಪಿಸಲಾಗಿದೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೇ ದೋಖಾ ಹಾಗೂ 1 ಕೋಟಿ ರೂಪಾಯಿ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖಲಾಗಿದೆ.
ಟೆಂಡರ್ ಕೊಡುವ ವಿಚಾರಕ್ಕೆ ಗುತ್ತಿಗೆದಾರನಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದಲ್ಲದೇ 1 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊಡಲಿಲ್ಲವೆಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾರೆ. ಇನ್ನು ಸಚಿನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಬಂಧಿಕ ವಿರೋಧದ ನಡುವೆಯೇ ಪೊಲೀಸರು ಮೃತ ಸಚಿನ್ ಅವರ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






