ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ "ಉಚಿತ ಸಾರಿಗೆ ಭಾಗ್ಯ" ಘೋಷಿಸಿದ ಸರ್ಕಾರ!

ಜುಲೈ 11, 2025 - 14:16
 0  11
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ "ಉಚಿತ ಸಾರಿಗೆ ಭಾಗ್ಯ" ಘೋಷಿಸಿದ ಸರ್ಕಾರ!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಹೊಸದಾಗಿ ಉಚಿತ ಬಸ್ ಸೌಲಭ್ಯ ಘೋಷಣೆಯಾಗಿದೆ. ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಎಲ್ಕೆಜಿ ಇಂದ ಪಿಯುಸಿ ತನಕ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡಲು ಸರ್ಕಾರ ತೀರ್ಮಾನಿಸಿದೆ.

ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಎಕ್ಸ್‌ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸರ್ಕಾರದ ನಿರ್ಧಾರವು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಬಹುಮಟ್ಟಿಗೆ ಉಪಯುಕ್ತವಾಗಲಿದೆ ಎಂಬ ನಿರೀಕ್ಷೆಯಿದೆ.

"ಸರ್ಕಾರಿ ಶಾಲೆಗಳ ಹಾಜರಾತಿ ಮತ್ತು ಗುಣಮಟ್ಟ ಹೆಚ್ಚಿಸಲು ನಾವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇವೆ. ಇದರಿಂದಾಗಿ ಬಡ ಕುಟುಂಬದ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗದೆ ಸದುಪಯೋಗ ಪಡೆಯುತ್ತಾರೆ," ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೆಪಿಎಸ್ ಶಾಲೆಗಳ ಮಕ್ಕಳಿಗೆ ಯೋಜನೆ ಜಾರಿಗೆ ಬರಲಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow