ಸಹ ನಟಿಯ ಮೇಲೆ ಅತ್ಯಾಚಾರ ಆರೋಪ: “ಕುಲದಲ್ಲಿ ಕೀಳ್ಯಾವುದೋ” ಸಿನಿಮಾ ನಟ ಮಡೆನೂರು ಮನು ಅರೆಸ್ಟ್

ಕಾಮಿಡಿ ಕಿಲಾಡಿ ಶೋ ಮೂಲಕ ಮಿಂಚಿದ್ದ ಮಡೆನೂರು ಮನು ಮೇಲೆ ಕಿರುತೆರೆ ನಟಿ ಅತ್ಯಾಚಾರ ಆರೋಪ ಮಾಡಿದ್ದು, ಘಟನೆ ಸಂಬಂಧ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ. ಮನು ಅವರನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಕಾನೂನು ಪ್ರಕ್ರಿಯೆ ಮುಂದುವರಿಸಲಾಗುವುದು. ಬಳಿಕ ಇಂದು ರಾತ್ರಿ ಬಂಧಿಸಿ ಜಡ್ಜ್ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.
ಮಡೆನೂರು ಮನು ಮತ್ತು ಯುವತಿ ಮಧ್ಯೆ 2018ರಲ್ಲಿ ಪರಿಚಯ ಬೆಳೆದಿತ್ತು. ಮನು ಅವರೇ ಯುವತಿಗೆ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದರು. ಯುವತಿ ಜೊತೆಗೆ ಆಪ್ತತೆ ಬೆಳೆಸಿಕೊಂಡಿದ್ದ ಮನುಗೆ ಈ ಮೊದಲೇ ಮದುವೆ ಆಗಿ ಒಂದು ಮಗು ಸಹ ಇತ್ತು! ಮನು ಜೊತೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾಗ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪ ಹೊರಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






