ಸಾಲಗಾರರಿಗೆ ಗುಡ್ ನ್ಯೂಸ್: ಬಡ್ಡಿ ದರದಲ್ಲಿಲ್ಲ ಯಾವುದೇ ಬದಲಾವಣೆ: ಶಕ್ತಿಕಾಂತ್ ದಾಸ್

ಅಕ್ಟೋಬರ್ 9, 2024 - 21:14
 0  8
ಸಾಲಗಾರರಿಗೆ ಗುಡ್ ನ್ಯೂಸ್: ಬಡ್ಡಿ ದರದಲ್ಲಿಲ್ಲ ಯಾವುದೇ ಬದಲಾವಣೆ: ಶಕ್ತಿಕಾಂತ್ ದಾಸ್

ನವದೆಹಲಿಭಾರತೀಯ ರಿಸರ್ವ್ಬ್ಯಾಂಕ್ಸತತ 10ನೇಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇರುವಂತೆ ಶೇಕಡಾ 6.5ರಲ್ಲೇ ಮುಂದುವರಿಸಿದೆ. ತನ್ನ ಆರ್ಥಿಕ ನೀತಿಗಳ ಸಭೆ ಬಳಿಕಸುದ್ದಿಗೋಷ್ಠಿ ನಡೆಸಿದ ಆರ್​ಬಿಐ ಗವರ್ನರ್​​ ಶಕ್ತಿಕಾಂತ್​ ದಾಸ್​, ಬಡ್ಡಿದರವನ್ನು ಯಥಾಸ್ಥಿತಿಯಲ್ಲೇ ಮುಂದುವರೆಸುವುದಾಗಿ ಘೋಷಿಸಿದ್ದಾರೆ.

ಹೌದು 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 7.2% ರಷ್ಟಾಗುವ ಮುನ್ಸೂಚನೆ ಇದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ತರದೇ 6.5% ನಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಪೈಕಿ 5:1 ರಷ್ಟು ಸದಸ್ಯರು ನಿರ್ಧಾರಕ್ಕೆ ಸಮ್ಮತಿ ಸೂಚಿಸಿದರು ಎಂದು ತಿಳಿಸಿದರು. ಕಳೆದ ಆಗಸ್ಟ್ನಲ್ಲಿ ನಡೆದ ಸಭೆಯಲ್ಲೂ ಆರ್ಬಿಐ ಇದೇ ದರವನ್ನು ಕಾಯ್ದುಕೊಂಡಿತ್ತು. ಕೊನೆಯದ್ದಾಗಿ 2023 ಫೆಬ್ರವರಿ 8ರಂದು ನಡೆದ ಸಭೆಯಲ್ಲಿ ಆರ್ಬಿಐ ರೆಪೋ ದರ ಏರಿಕೆ ಮಾಡಿತ್ತು

ಅಮೆರಿಕದ ಫೆಡರಲ್ರಿಸರ್ವ್ಬಡ್ಡಿದರವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಭಾರತದಲ್ಲೂ ಆರ್ಬಿಐ ಬಡ್ಡಿ ದರವನ್ನು ಇಳಿಕೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಇಸ್ರೇಲ್‌-ಇರಾನ್ನಡುವೆ ಯುದ್ಧ ಭೀತಿಯಿಂದಾಗಿ ಬಡ್ಡಿದರವನ್ನು ಇಳಿಸದ ಆರ್ಬಿಐ ಯಥಾಸ್ಥಿತಿಯನ್ನೇ ಕಾಯ್ದುಕೊಂಡಿದೆ.

ರೆಪೋ ರೇಟ್ ಎಂದರೇನು?
ವಾಣಿಜ್ಯ ಬ್ಯಾಂಕ್ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್ಜಾಸ್ತಿ ಇದ್ದರೆ ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow