ಸಾಲಬಾಧೆ ತಾಳಲಾರದೇ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರ ದುರ್ಮರಣ

ಸೆಪ್ಟೆಂಬರ್ 14, 2025 - 12:19
 0  11
ಸಾಲಬಾಧೆ ತಾಳಲಾರದೇ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರ ದುರ್ಮರಣ

ಆನೇಕಲ್: ಸಾಲದ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶಿವು (32), ಮಗಳು ಚಂದ್ರಕಳಾ (11), ಮಗ ಉದಯ್ ಸೂರ್ಯ (07) ಎಂದು ಗುರುತಿಸಲಾಗಿದೆ. ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬವು ಸಾಲ ಮಾಡಿಕೊಂಡಿತ್ತು. ಸಾಲದ ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಆತ್ಮಹತ್ಯೆಗೆ ನಿರ್ಧಾರ ಕೈಗೊಂಡಿದ್ದಾರೆ.

ಮೊದಲು ಪತಿ ಮತ್ತು ಇಬ್ಬರು ಮಕ್ಕಳ ಕುತ್ತಿಗೆಯನ್ನು ವೆಲ್ನಿಂದ ಕತ್ತರಿಸಿ, ಬಳಿಕ ಹೆಂಡತಿಯೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಆಕೆ ಪ್ರಾಣಾಪಾಯದಿಂದ ಪಾರಾಗಿ, ಪ್ರಸ್ತುತ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow