ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ: ತಿಮರೋಡಿ ಬಂಧನಕ್ಕೆ ಗೃಹ ಸಚಿವ ಸೂಚನೆ!

ಆಗಸ್ಟ್ 18, 2025 - 14:07
 0  29
ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ: ತಿಮರೋಡಿ ಬಂಧನಕ್ಕೆ ಗೃಹ ಸಚಿವ ಸೂಚನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಹೇಶ್ ಶೆಟ್ಟಿ ತಿಮ್ಮರೋಡಿ ವಿರುದ್ಧ ಸರ್ಕಾರ ತೀವ್ರ ಕ್ರಮಕ್ಕೆ ಮುಂದಾಗಿದೆ.

ಸದನದಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ತಕ್ಷಣವೇ ಮಹೇಶ್ ಶೆಟ್ಟಿ ತಿಮ್ಮರೋಡಿಯ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಲು ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ನೀಡಿದ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬಿಎನ್ಎಸ್ ಕಾಯ್ದೆಯಡಿ ಅವಹೇಳನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಿಮರೋಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ,

 ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವರು ನೀಡಿರುವ ಸೂಚನೆಯ ಮೇರೆಗೆ, ಪೊಲೀಸರು ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಬಂಧನವಾಗುವ ಸಾಧ್ಯತೆಯಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow