ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ: ಸಿಎಂ ಪುತ್ರ ಯತೀಂದ್ರ ಅಚ್ಚರಿ ಹೇಳಿಕೆ!
ಬೆಳಗಾವಿ: ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ನವೆಂಬರ್ ಕ್ರಾಂತಿಯ ಮುನ್ಸೂಚನೆ ಮತ್ತು ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆಯ ಚರ್ಚೆಗಳ ಬೆನ್ನಲ್ಲೇ ಸಿಎಂ ಪುತ್ರ ಯತೀಂದ್ರ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು.
ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ನಮಗೆ ಮಾರ್ಗದರ್ಶನ ಮಾಡಿ ಮುನ್ನಡೆಸುವವರು ಬೇಕು. ಜೊತೆಗೆ ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು.
ಸತೀಶ್ ಜಾರಕಿಹೊಳಿ ಅವರಲ್ಲಿ ಈ ಜವಾಬ್ದಾರಿ ನಿಭಾಯಿಸುವ ಗುಣಗಳಿವೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸತೀಶ್ ಜಾರಕಿಹೊಳಿಯವರು ಸೂಕ್ತ. ಮುಂದೆ ಬರುವ ದೊಡ್ಡ ಜವಾಬ್ದಾರಿಗಳನ್ನು ಹೊರಲು ತಯಾರಾಗಿರಿ ಎಂದು ಹೇಳಿದ್ದಾರೆ.
ಇವತ್ತು ತಂದೆಯವರು ರಾಜಕೀಯ ಕೂನೆಗಾಲದಲ್ಲಿದ್ದಾರೆ. ಅವರ ರಾಜಕೀಯ ಕೂನೆ ಘಟ್ಟದಲ್ಲಿರುವ ಸಮಯದಲ್ಲಿ ಈ ರೀತಿ ವೈಚಾರಿಕವಾಗಿ ಪ್ರಗತಿಪರವಾಗಿ ಸಿದ್ದಾಂತ ಇಟ್ಟುಕೊಂಡಿರುವವರಿಗೆ ಮಾರ್ಗದರ್ಶಶನ, ನೇತೃತ್ವ ವಹಿಸಿಕೊಳ್ಳಲು ಒಬ್ಬ ನಾಯಕ ಬೇಕು. ಸತೀಶ್ ಜಾರಕಿಹೊಳಿಯವರು ಅಂತಹ ಜವಾಬ್ದಾರಿ ವಹಿಸಿಕೊಳ್ಳಲು ಸಮರ್ಥರಿದ್ದಾರೆ ಎಂದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?