ಸಿದ್ದರಾಮಯ್ಯ CM ಸ್ಥಾನ ಮುಂದುವರಿಯುವ ಯೋಗ್ಯತೆ ಕಳೆದುಕೊಂಡಿದ್ದಾರೆ: ಆರ್ ಅಶೋಕ್ ಕಿಡಿ
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಕಳೆದುಕೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಸಾಕ್ಷಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದ್ದರು.
ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅದು ಡಬಲ್ ಆಗಿದೆ ಎಂದು ಪತ್ರ ಬರೆದಿದ್ದಾರೆ. ಇದೊಂದು ಆಧಿಕೃತ ಪತ್ರ. ಹೀಗಾಗಿ ಇದುವೇ ಸಾಕ್ಷಿ’ ಎಂದು ಅಶೋಕ್ ಹೇಳಿದರು. ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ನಮ್ಮ ಬಳಿ ಸಾಕ್ಷಿ ಕೇಳುತ್ತಿದ್ದರು.
ನಮ್ಮ ಸರ್ಕಾರ ಬಂದರೆ ಕಮಿಷನ್ ಪಡೆಯಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈಗ ಅವರ ಸರ್ಕಾರದಲ್ಲಿ 80% ಸರ್ಕಾರ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಕಳೆದುಕೊಂಡಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಅಶೋಕ್ ಆಗ್ರಹಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?