ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿಗೆ ಡೇಟ್ ಫಿಕ್ಸ್ ! ಯಾವಾಗ?

ಅಕ್ಟೋಬರ್ 9, 2025 - 09:09
 0  9
ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿಗೆ ಡೇಟ್ ಫಿಕ್ಸ್ ! ಯಾವಾಗ?

ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿಗೆ ಡೇಟ್ ಫಿಕ್ಸ್ ಆಗಿದೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಇಬ್ಬರು ಆಟಗಾರರು 2027 ರ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಇದರ ನಡುವೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬೀಳ್ಕೊಡಲು ಕ್ರಿಕೆಟ್ ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ.

ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿದೆ ಸಿಇಒ ಟಾಡ್ ಗ್ರೀನ್‌ಬರ್ಗ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಇದುವೇ ಕೊನೆಯ ಆಸ್ಟ್ರೇಲಿಯಾ ಸರಣಿ. ಹೀಗಾಗಿ ಅವರಿಗೆ ಬೀಳ್ಕೊಡುಗೆ ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸುತ್ತಿದೆ. ಅದರಂತೆ ಅಕ್ಟೋಬರ್​ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ವೇಳೆ ಅವರನ್ನು ಗೌರವಿಸಲಿದ್ದೇವೆ ಎಂದು ತಿಳಿಸಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow