ಹಠಾತ್ ಹೃದಯಾಘಾತಕ್ಕೆ BJP ಯುವ ಮೋರ್ಚಾದ ಮುಖಂಡ ಸಾವು..! ಹೆಚ್ಚಿದ ಆತಂಕ
ರಾಜ್ಯದಲ್ಲಿ ಹೃದಯಾಘಾತದ ಸರಣಿ ಸಾವುಗಳು ಮುಂದುವರೆದಿವೆ. ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಇದೀಗ ಬಿಜೆಪಿ ಯುವ ಮೋರ್ಚಾದ ಮುಖಂಡ ಹೆಬ್ಬಾಕ ನೀಲಕಂಠಸ್ವಾಮಿ (36) ಅವರು ಹಠಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಬಿಜೆಪಿ ಯುವ ಮೋರ್ಚಾದ ಮುಖಂಡ ಹೆಬ್ಬಾಕ ನೀಲಕಂಠಸ್ವಾಮಿ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಈ ಘಟನೆ ತುಮಕೂರಿನ ಕುವೆಂಪು ನಗರದಲ್ಲಿ ಸಂಭವಿಸಿದ್ದು, ಯುವಕರಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ಗಂಭೀರ ಆತಂಕವನ್ನು ಮೂಡಿಸಿದೆ. ನೀಲಕಂಠಸ್ವಾಮಿ ಅವರ ಅಕಾಲಿಕ ನಿಧನವು ಕುಟುಂಬಸ್ಥರು, ಸ್ನೇಹಿತರು ಮತ್ತು ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ತುಮಕೂರಿನ ಕುವೆಂಪು ನಗರದಲ್ಲಿ ಜುಲೈ 30, 2025ರಂದು, ನೀಲಕಂಠಸ್ವಾಮಿ ಅವರು ಇದ್ದಕ್ಕಿದ್ದಂತೆ ತಲೆಸುತ್ತಿ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದ್ದರೂ ಕೂಡ ಹೃದಯಾಘಾತದಿಂದ ಉಂಟಾದ ತೀವ್ರತೆಯಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ವೈದ್ಯರು ತೀವ್ರ ಪ್ರಯತ್ನ ನಡೆಸಿದರೂ, ನೀಲಕಂಠಸ್ವಾಮಿ ಕೊನೆಯುಸಿರೆಳೆದರು. ಈ ಘಟನೆಯು ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?