ಹಲವು ವಸ್ತು, ಸೇವೆಗಳ ಮೇಲಿನ ತೆರಿಗೆ ಇಳಿಕೆ, ಆರೋಗ್ಯ ವಿಮೆ ಬಗ್ಗೆ ನವೆಂಬರ್‌ನಲ್ಲಿ ನಿರ್ಧಾರ

ಹಲವು ವಸ್ತು, ಸೇವೆಗಳ ಮೇಲಿನ ತೆರಿಗೆ ಇಳಿಕೆ, ಆರೋಗ್ಯ ವಿಮೆ ಬಗ್ಗೆ ನವೆಂಬರ್‌ನಲ್ಲಿ ನಿರ್ಧಾರ
ಆರೋಗ್ಯ ವಿಮೆಯ ಪ್ರೀಮಿಯಂ ಮೇಲೆ ವಿಧಿಸಲಾಗುತ್ತಿರುವ ಶೇ. 18ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ರದ್ದುಗೊಳಿಸಬೇಕೆಂದು ಕೇಳಿಬಂದಿರುವ ಆಗ್ರಹವನ್ನು ಜಿಎಸ್‌ಟಿ ಮಂಡಳಿ ಗಂಭೀರವಾಗಿ ಪರಿಗಣಿಸಿದ್ದು, ತೆರಿಗೆ ಭಾರ ಇಳಿಸುವುದು ಬಹುತೇಕ ಖಚಿತವಾಗಿದೆ.
ಸೋಮವಾರ ನಡೆದ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಆದರೆ, ಪ್ರಸ್ತುತ ಶೇ. 18ರಷ್ಟು ಇರುವ ಜಿಎಸ್‌ಟಿಯನ್ನು ಶೇ. 5ಕ್ಕೆ ಇಳಿಸಬೇಕೇ ಅಥವಾ ಶೂನ್ಯಕ್ಕೆ ಇಳಿಸಬೇಕೇ ಎಂಬ ಬಗ್ಗೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ, ನವೆಂಬರ್‌ನಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು.
ಅಲ್ಲದೆ, ಈ ಕುರಿತು ಅಂತಿಮ ಶಿಫಾರಸು ಸಲ್ಲಿಸಲು ಬಿಹಾರ ಉಪ ಮುಖ್ಯಮಂತ್ರಿ ಸಮರ್ಥ್ ಚೌಧರಿ ನೇತೃತ್ವದಲ್ಲಿ ಸಚಿವರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಅಕ್ಟೋಬರ್ ಅಂತ್ಯದ ವೇಳೆಗೆ ವರದಿಯನ್ನು ಸಲ್ಲಿಸಲಿದ್ದು, ನವೆಂಬರ್‌ನಲ್ಲಿ ನಡೆಯಲಿರುವ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಸಭೆಯಲ್ಲಿ ಇದನ್ನು ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು.
ಜಿಎಸ್‌ಟಿ ಮಂಡಳಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ವಿಷಯ ತಿಳಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






