ಹಾಸನಾಂಬೆಯ ದರ್ಶನ ಮುಗಿಸಿ ಬರುತ್ತಿದ್ದ ಬೈಕ್​ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾ*ವು.!

ಅಕ್ಟೋಬರ್ 20, 2025 - 16:13
 0  27
ಹಾಸನಾಂಬೆಯ ದರ್ಶನ ಮುಗಿಸಿ ಬರುತ್ತಿದ್ದ ಬೈಕ್​ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾ*ವು.!

ಹಾಸನ: ಹಾಸನಾಂಬ ದೇವಿ ದರ್ಶನ  ಪಡೆದು ವಾಪಾಸ್ ಬರುತ್ತಿದ್ದವರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲುಯಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಯುವತಿ ಗಂಭೀರ ಗಾಯಗಳಿಂದ ಐಸಿಯುಗೆ ದಾಖಲೆಯಾಗಿದ್ದಾರೆ. 

ಮೃತರು ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದ್ದು, ಗಾಯಗೊಂಡಿರುವವರು ಛಾಯಾ (20). ಈ ಮೂವರು ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಹಾಸನಾಂಬ ದೇವಿಯ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿಕೊಂಡು ವಾಪಾಸ್ ಹೋಗುತ್ತಿದ್ದ ವೇಳೆ ಕಗ್ಗಲಿಕಾವಲು ಅರಣ್ಯ ಪ್ರದೇಶದ ಬಳಿ ದುರ್ಘಟನೆ ಸಂಭವಿಸಿದೆ.

ಚನ್ನರಾಯಪಟ್ಟಣದ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಮೊದಲು ಒಂದು ಆಕ್ಟಿವಾ ಹೋಂಡಾಗೆ ಡಿಕ್ಕಿ ಹೊಡೆದು ಬಳಿಕ ಈ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ಸವಾರ ಮೊಹಮ್ಮದ್ ಶಾಹಿದ್ಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow