ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್: ಶಂಕಿತ 8 ಮಂದಿ ಖಾಕಿ ವಶಕ್ಕೆ!

ಮಂಗಳೂರು:- ನಡುರಸ್ತೆಯಲ್ಲೇ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತರನ್ನು ಖಾಕಿ ವಶಕ್ಕೆ ಪಡೆದಿದೆ.
ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಅದರಂತೆ ತನಿಖೆ ಚುರುಕುಗೊಳಿಸಿ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ. ಇನ್ನೂ ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






