ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ NIA ಹೆಗಲಿಗೆ..!

ಜೂನ್ 8, 2025 - 18:06
 0  12
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣದ ತನಿಖೆ NIA ಹೆಗಲಿಗೆ..!

ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆಬಿಜೆಪಿ ಕಾರ್ಯಕರ್ತರು, ನಾಯಕರು ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

ಮೇ 1 ರಂದು ಫಾಜಿಲ್ಹತ್ಯೆಯ ಆರೋಪಿ ಸುಹಾಸ್ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ನಡೆದಿದೆ. ರಾಜ್ಯದ ಪೊಲೀಸ್‌ (Police) ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.

ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow