ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್: ಒಂದು ದಿನದ ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಕ್ಯಾಬಿನೆಟ್ ಒಪ್ಪಿಗೆ

ಅಕ್ಟೋಬರ್ 9, 2025 - 16:24
 0  10
ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್: ಒಂದು ದಿನದ ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಕ್ಯಾಬಿನೆಟ್ ಒಪ್ಪಿಗೆ

ಬೆಂಗಳೂರು:- ಗ್ಯಾರಂಟಿಗಳಿಂದಲೇ ಜನರ ಮನಸ್ಸು ಗೆದ್ದ ಕಾಂಗ್ರೆಸ್ ಆಡಳಿತಕ್ಕೆ ಜನತೆ ಅದರಲ್ಲೂ ಹೆಣ್ಣು ಮಕ್ಕಳು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಶಕ್ತಿ ಯೋಜನೆ, ಗೃಹಳಕ್ಷ್ಮಿ, ಹೀಗೆ ಹಲವು ಮಹಿಳಾ ಪರ ಯೋಜನೆಗಳನ್ನು ಜಾರಿ ಮಾಡಿ ಸ್ತ್ರೀಪರ ಸರ್ಕಾರ ಎಂದು ಸಾಬೀತು ಮಾಡಿದೆ.

ಇದೀಗ ಮತ್ತೊಂದು ಕಾಂಗ್ರೆಸ್ ಮಹಿಳೆಯರ ಮನಸ್ಸು ಕದ್ದಿದೆ. ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ  ಕೊಡುವ ಮಹತ್ವದ ತೀರ್ಮಾನಕ್ಕೆ ಇಂದಿನ ಕ್ಯಾಬಿನೆಟ್ ಒಪ್ಪಿದೆ. 

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 ಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತು ಚಕ್ರ ರಜೆ ನೀಡಲಾಗುತ್ತದೆ. ವರ್ಷಕ್ಕೆ 12 ದಿನ ರಜೆ ನೀಡುವುದಾಗಿದ್ದು, ಯಾವ ದಿನ ರಜೆ ಪಡೆಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಲಿದ್ದಾರೆ.

ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ  ಒಂದು ದಿನ ರಜೆ ತೆಗೆದುಕೊಳ್ಳಬಹುದು. ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow