ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುವ ದಂಪತಿಗಳಿಗೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

ಎಪ್ರಿಲ್ 17, 2025 - 21:00
 0  16
ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುವ ದಂಪತಿಗಳಿಗೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್, ತಮ್ಮ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾದ ದಂಪತಿಗಳು ತಮ್ಮ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾದ ಬೆದರಿಕೆಯ ಗ್ರಹಿಕೆ ಇಲ್ಲದಿದ್ದರೆ ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.

ಹೌದು ತಮ್ಮ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಸ್ವಂತ ಇಚ್ಛೆಯಿಂದ ವಿವಾಹವಾಗುವ ಜೋಡಿಗೆ ಯಾವುದೇ ಬೆದರಿಕೆ ಇದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ. ರಕ್ಷಣೆ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಾಲಯ ಈ ತೀರ್ಪು ನೀಡಿದೆ. 

ಅರ್ಹ ಪ್ರಕರಣದಲ್ಲಿ ದಂಪತಿಗೆ ನ್ಯಾಯಾಲಯ ಭದ್ರತೆ ಒದಗಿಸಬಹುದು. ಆದರೆ, ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲದಿದ್ದಾಗ, ಅಂತಹ ದಂಪತಿ ಸಮಾಜವನ್ನು ಎದುರಿಸಿ ನಿಲ್ಲುವುದನ್ನು ಕಲಿಯಬೇಕು ಎಂದು ತಿಳಿಸಿದೆ. ಪೊಲೀಸ್ ರಕ್ಷಣೆ ಮತ್ತು ಪೋಷಕರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ಕೋರಿ ಶ್ರೇಯಾ ಕೇಸರ್ವಾನಿ ಮತ್ತು ಅವರ ಪತಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣದಲ್ಲಿ ದಂಪತಿಗೆ ಯಾವುದೇ ಗಂಭೀರ ಸ್ವರೂಪದ ಬೆದರಿಕೆ ಇಲ್ಲ ಎಂದು ಗಮನಿಸಿ ಅವರ ರಿಟ್ಅರ್ಜಿಯನ್ನು ವಜಾ ಮಾಡಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow