10th, 12 ನೇ ತರಗತಿ ಪಾಸಾಗಿದ್ಯಾ!? ಹಾಗಿದ್ರೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಸಾಕಷ್ಟು ಉದ್ಯೋಗ – ಇಂದೇ ಅರ್ಜಿ ಸಲ್ಲಿಸಿ

ಜನವರಿ 28, 2025 - 08:06
 0  9
10th, 12 ನೇ ತರಗತಿ ಪಾಸಾಗಿದ್ಯಾ!? ಹಾಗಿದ್ರೆ ಕರ್ನಾಟಕ ವಿದ್ಯುತ್ ನಿಗಮದಲ್ಲಿದೆ ಸಾಕಷ್ಟು ಉದ್ಯೋಗ – ಇಂದೇ ಅರ್ಜಿ ಸಲ್ಲಿಸಿ

ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ವಿದ್ಯುತ್ ನಿಗಮ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಹತೆ 10ನೇ, 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ. ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು.

ಒಟ್ಟು ಹುದ್ದೆಗಳು 2975 ಅರ್ಜಿ ಸಲ್ಲಿಸುವ ಬಗೆ ಆನ್​​ಲೈನ್ ಉದ್ಯೋಗ ಸ್ಥಳಕರ್ನಾಟಕ ವಿದ್ಯಾರ್ಹತೆ 10ನೇ, 12ನೇ, ಡಿಪ್ಲೋಮಾ, ಬಿ. ಅಥವಾ ಬಿ.ಟೆಕ್

ವಯೋಮಿತಿ ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

KPTCL ವಯೋಮಾನ ಸಡಿಲಿಕೆ: ಎಸ್ಸಿ/ಎಸ್ಟಿ/ಕ್ಯಾಟ್-I ಅಭ್ಯರ್ಥಿಗಳು: 05 ವರ್ಷ ಸಡಿಲಿಕೆ. ಪ್ರವರ್ಗ -2/2ಬಿ/3 & 3ಬಿ ಅಭ್ಯರ್ಥಿಗಳು: 03 ವರ್ಷ ಸಡಿಲಿಕೆ

ವೇತನ ಶ್ರೇಣಿ 1ನೇ ವರ್ಷ: ರೂ. 17,000/- 2ನೇ ವರ್ಷ: ರೂ. 19,000/- 3ನೇ ವರ್ಷ: ರೂ. 21,000/-

ಅರ್ಜಿ  ಶುಲ್ಕ: ಅಂಗವಿಕಲ ಅಭ್ಯರ್ಥಿಗಳು: ಶೂನ್ಯ ಶುಲ್ಕ ಎಸ್ಸಿ/ಎಸ್ಟಿ ಅಭ್ಯರ್ಥಿಗಳು: ರೂ. 378 ಶುಲ್ಕ ಸಾಮಾನ್ಯ/ಪ್ರವರ್ಗ -2/2ಬಿ/3 & 3ಬಿ ಅಭ್ಯರ್ಥಿಗಳು: ರೂ. 614 ಶುಲ್ಕ ಕಟ್ಟಬೇಕು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow