13 ವರ್ಷದ ವಿದ್ಯಾರ್ಥಿನಿ ಗ್ಯಾಂಗ್ ರೇಪ್: ಗೌರ್ಮೆಂಟ್ ಟೀಚರ್ ಗಳಿಂದಲೇ ಕೃತ್ಯ!

ಫೆಬ್ರವರಿ 8, 2025 - 12:11
 0  22
13 ವರ್ಷದ ವಿದ್ಯಾರ್ಥಿನಿ ಗ್ಯಾಂಗ್ ರೇಪ್: ಗೌರ್ಮೆಂಟ್ ಟೀಚರ್ ಗಳಿಂದಲೇ ಕೃತ್ಯ!

ಚೆನ್ನೈ:- ತಮಿಳುನಾಡಿನ ಕೃಷ್ಣಗಿರಿಯಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜರುಗಿದೆ. 

ಘಟನೆ ಬೆಳಕಿಗೆ ಬಂದ ಕೂಡಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಚಿನ್ನಸ್ವಾಮಿ, ಆರುಮುಗಂ ಹಾಗೂ ಪ್ರಕಾಶ್ ಬಂಧಿತ ಶಿಕ್ಷಕರು. ಕೆಲ ದಿನಗಳಿಂದ ವಿದ್ಯಾರ್ಥಿನಿ ಶಾಲೆಗೆ ಬಾರದೇ ಇರುವುದನ್ನು ಗಮನಿಸಿದ ಮುಖ್ಯಶಿಕ್ಷಕಿ ಆಕೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಪೋಷಕರು, ಆಕೆ ಮೇಲೆ ಶಾಲೆಯಲ್ಲಿ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಬಗ್ಗೆ ತಿಳಿಸಿದ್ದಾರೆ

ವಿಷಯ ತಿಳಿದ ಮುಖ್ಯಶಿಕ್ಷಕಿ ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಬಳಿಕ ಕೃಷ್ಣಗಿರಿ ಜಿಲ್ಲೆಯ ಬಾರ್ಕೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಕಾಮುಕ ಮೂವರು ಶಿಕ್ಷಕರನ್ನ ಬಂಧಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow