14 ವರ್ಷಗಳ ಹಿಂದೆ ರಾಜ್ಯದಲ್ಲೇ ಅತಿದೊಡ್ಡ ಪೆಟ್ರೋಲ್ ಕಳ್ಳತನ ಮಾಡಿದ್ದ ಗ್ಯಾಂಗ್ ಮತ್ತೆ ಅರೆಸ್ಟ್!

ಚಿಕ್ಕಮಗಳೂರು:- ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಕೋಟ್ಯಂತರ ರೂ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. 14 ವರ್ಷಗಳ ಹಿಂದೆ ರಾಜ್ಯದಲ್ಲೇ ಅತಿದೊಡ್ಡ ಪೆಟ್ರೋಲ್ ಕಳ್ಳತನ ಮಾಡಿದ್ದ ಗ್ಯಾಂಗ್ ನಿಂದ ಮತ್ತೆ ಕಳ್ಳತನ ನಡೆದಿದ್ದು, ಇದೀಗ ಪೊಲೀಸರ ಅತಿಥಿ ಆಗಿದ್ದಾರೆ.
ಹಳೆ ಚಾಳಿ ಬಿಡದ ಗ್ಯಾಂಗ್ ಮತ್ತೆ ಪೈಪ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಪೆಟ್ರೋನೆಟ್ ಸಿಬ್ಬಂದಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಹಾಸನದ BV3 ವಿಭಾಗದಲ್ಲಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಶಿಗರು ಗ್ರಾಮದ ಬಳಿ ಕಳೆದ ರಾತ್ರಿ ಪೈಪ್ ಲೈನ್ನಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ಹಾಸನದ ಕಚೇರಿಯಲ್ಲಿ ಅಲಾರಾಂ ಸೂಚನೆ ನೀಡಿತ್ತು. ಸ್ಥಳಕ್ಕೆ ಬಂದ ಪೆಟ್ರೋನೆಟ್ ಅಧಿಕಾರಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಹಿರೇಶಿಗರು ಗ್ರಾಮದ ಬಳಿ ಸಿಗ್ನಲ್ ನೀಡಿದ್ದ ಸ್ಥಳದಲ್ಲಿ ಪೆಟ್ರೋಲ್ ವಾಸನೆ ಬಂದಿದ್ದು ಪರಿಶೀಲನೆ ನಡೆಸಿದಾಗ
ಟಿಪ್ಪರ್ ಲಾರಿಯೊಳಗೆ 2 ಸಾವಿರ ಲೀಟರ್ ಪೆಟ್ರೋಲ್ ಇರುವುದು ಪತ್ತೆಯಾಗಿತ್ತು. ಟಿಪ್ಪರ್ ಬಳಿ ಪೆಟ್ರೋಲ್ ತೆಗೆಯಲು ಬಳಸುವ ಪೈಪ್, ನಾಲ್ಕು ಕಾರುಗಳು ಪತ್ತೆಯಾಗಿದೆ. ತಕ್ಷಣ ಪೆಟ್ರೋನೆಟ್ ಸಿಬ್ಬಂದಿಗಳು ಗೋಣಿಬೀಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು 2 ಸಾವಿರ ಲೀಟರ್ ಪೆಟ್ರೋಲ್, ಟಿಪ್ಪರ್, ನಾಲ್ಕು ಕಾರುಗಳು ಸೇರಿದಂತೆ ಪೈಪ್ಗಳನ್ನ ವಶಕ್ಕೆ ಪಡೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






