14 ವರ್ಷದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಖಿನ್ನತೆಗೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖನೌ ಸಮೀಪದ ಗ್ರಾಮದಲ್ಲಿ 14 ವರ್ಷದ ಬಾಲಕಿ ಅತ್ಯಾಚಾರದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜೂನ್ 28 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಕುಟುಂಬಸ್ಥರ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಬಾಲಕಿ ತನ್ನ ಮೂರು ವರ್ಷದ ತಮ್ಮನೊಂದಿಗೆ ಮನೆಯ ವರಾಂಡದಲ್ಲಿ ಕುಳಿತಿದ್ದಳು. ಆಕೆಯ ತಾಯಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ, ವಿಪಿನ್, ವಿಶಾಲ್ ಮತ್ತು ಹೇಮಂತ್ ಎಂಬ ಮೂವರು ಯುವಕರು ಬೈಕ್ನಲ್ಲಿ ಬಂದು ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂಬ ಆರೋಪವಿದೆ.
ಪರಿವಾರದವರ ದೂರಿನಂತೆ, ಈ ಮೂವರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ಬಳಿಕ ಮಾನಸಿಕವಾಗಿ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಕರಣದ ಕುರಿತು ಪೋಕ್ಸೋ ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






