1600 ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಸಿದ್ರಾ ಮಾಗಡಿ ಶಾಸಕ ಬಾಲಕೃಷ್ಣ?

ಬೆಂಗಳೂರು:- ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, 1600 ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಸಿರುವ ಆರೋಪ ಇದೀಗ ಬಟಾಬಯಲಾಗಿದೆ.
ಈ ಸಂಬಂಧ ಎನ್ಆರ್ ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳೂ ಇದರ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕೆಂಗೇರಿಯ ಸರ್ವೇ ನಂಬರ್ 69 ರಲ್ಲಿ ಇರುವ 183 ಎಕರೆ ಜಾಗದ ಕುರಿತು ವಿವಾದಗಳು ಎದ್ದಿದ್ದು, 1973 ರಲ್ಲಿ 25 ಜನ ಜಮೀನುರಹಿತರಿಗೆ ಈ ಜಾಗ ಹಂಚಿಕೆಯಾಗಿತ್ತು. ಇದರಲ್ಲಿ SC/ST ಸಮುದಾಯದವರಿಗೆ ಪ್ರತಿ ವ್ಯಕ್ತಿಗೂ 1.20 ಎಕರೆ ಹಂಚಿಕೆಯಾಗಿತ್ತು. ಉತ್ತರಹಳ್ಳಿ-ಕೆಂಗೇರಿ ನಡು ಭಾಗದಲ್ಲಿ ಇರುವ ಈ ಜಾಗದಲ್ಲಿ ಹಲವು ಫಲಾನುಭವಿಗಳು ನಿಧನರಾದರು.
ಇತ್ತ, ಸರ್ಕಾರದ ಅನುಮತಿಯಿಲ್ಲದೆ ಈ ಜಾಗವನ್ನು ಮಾರಾಟ ಮಾಡಿರುವ ಬಗ್ಗೆ ಹಲವು ಆರೋಪಗಳು ಕೇಳಿ ಬಂದಿವೆ. ಸುರೇಂದ್ರ ಎಂಬ ವ್ಯಕ್ತಿ ಮಾರಾಟಕ್ಕೆ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿದೆ. ಸುರೇಂದ್ರ ಕೆಎಸ್ಎಸ್ ರೆಸಿಡೆನ್ಸಿ ಕಂಪನಿಯ ಮಾಲೀಕರಾಗಿದ್ದು, ಹೆಚ್ಸಿ ಬಾಲಕೃಷ್ಣ ಮತ್ತು ಕೆಲ ಪ್ರಭಾವಿಗಳ ಸಹಕಾರದಿಂದ ಮಾರಾಟಕ್ಕೆ ಮಾಡಿದ್ದಾರೆ ಎಂಬ ಆರೋಪಗಳಿವೆ.
ಹೀಗಾಗಿ ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆ ಯಾವ ಹಂತಕ್ಕೆ ಹೋಗಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






