2024-2025 ನೇ ಸಾಲಿನ SSLC ಫಲಿತಾಂಶ ಪ್ರಕಟ: 62.34% ಫಲಿತಾಂಶ - ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಮಾಹಿತಿ!

ಮೇ 2, 2025 - 12:56
 0  14
2024-2025 ನೇ ಸಾಲಿನ SSLC ಫಲಿತಾಂಶ ಪ್ರಕಟ: 62.34% ಫಲಿತಾಂಶ - ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಮಾಹಿತಿ!

ಬೆಂಗಳೂರು: ಬಹು ಕಾತುರದಿಂದ ರಿಸಲ್ಟ್ ಗಾಗಿ ಕಾದು ಕುಳಿತಿದ್ದ SSLC ವಿದ್ಯಾರ್ಥಿಗಳು ಉಫ್ ರಿಲೀಫ್ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಕಾರಣ ಇಂದು SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಎಸ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು 2024-25ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 

ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ 62.34% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಲ್ಲೇಶ್ವರಂನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. 

ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.

2024-25ನೇ ಸಾಲಿನ ಫಲಿತಾಂಶ ಹೀಗಿದೆ! 

ಹಾಜರಾದ ವಿದ್ಯಾರ್ಥಿಗಳು 842173.

ಉತ್ತೀರ್ಣರಾದರು 524984.

ಶೇಕಡಾ 62.34%.

ಫೇಲ್ ಆದವರು - 317,189.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow