2025-26ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ಪಟ್ಟಿ ಪ್ರಕಟ: ಯಾರ್ಯಾರಿಗೆ ಪ್ರಶಸ್ತಿ ಸಿಕ್ತು ಗೊತ್ತಾ..?

ಅಕ್ಟೋಬರ್ 30, 2025 - 18:00
 0  9
2025-26ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ಪಟ್ಟಿ ಪ್ರಕಟ: ಯಾರ್ಯಾರಿಗೆ ಪ್ರಶಸ್ತಿ ಸಿಕ್ತು ಗೊತ್ತಾ..?

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಬಾರಿ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರನ್ನು ವಿವಿಧ ಕ್ಷೇತ್ರಗಳಿಂದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಈ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದರು.

ಸಾಹಿತ್ಯ, ಸಂಗೀತ, ನೃತ್ಯ, ಚಿತ್ರರಂಗ, ಕ್ರೀಡೆ, ಸಮಾಜ ಸೇವೆ, ಶಿಕ್ಷಣ, ವೈದ್ಯಕೀಯ, ಪರಿಸರ ಹಾಗೂ ವಿಜ್ಞಾನ-ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದವರ ಸಾಧನೆಯನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರ ನಿರ್ಧರಿಸಿದೆ. ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಈ ಬಾರಿ ಯಾವುದೇ ಸಂಘ–ಸಂಸ್ಥೆಗಳಿಗೆ ಪ್ರಶಸ್ತಿ ನೀಡದಿರಲು ಸರ್ಕಾರ ನಿರ್ಧರಿಸಿದೆ.

ಅದರ ಜೊತೆಗೆ, 12 ಮಂದಿ ಮಹಿಳೆಯರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಲ್ಲಿ ಕೆಲವರು ಸ್ವಯಂ ಮನವಿ ಸಲ್ಲಿಸಿದ್ದರೂ, ಅವರು ತಮ್ಮ ಕ್ಷೇತ್ರದಲ್ಲಿ ನೀಡಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿ ವಿಜೇತರಿಗೆ ₹5 ಲಕ್ಷ ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ, ಮತ್ತು ಶಾಲು–ಸ್ಮರಣಿಕೆ ನೀಡಲಾಗುವುದು. ರಾಜ್ಯೋತ್ಸವ ಪ್ರಶಸ್ತಿಗಳನ್ನು ನವೆಂಬರ್ 1ರಂದು ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರದಾನ ಮಾಡಲಾಗುತ್ತದೆ.

ಜಾನಪದ ಕ್ಷೇತ್ರ

  • ಶ್ರೀ ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ

  • ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ

  • ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ

  • ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ

  • ಎಂ. ತೋಪಣ್ಣ – ಕೋಲಾರ

  • ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ

  • ಸಿಂಧು ಗುಜರನ್ದ – ದಕ್ಷಿಣ ಕನ್ನಡ

  • ಎಲ್. ಮಹದೇವಪ್ಪ ಉಡಿಗಾಲ – ಮೈಸೂರು

ಸಾಹಿತ್ಯ ಕ್ಷೇತ್ರ

  • ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ

  • ತುಂಬಾಡಿ ರಾಮಯ್ಯ – ತುಮಕೂರು

  • ಪ್ರೊ. ಅರ್. ಸುನಂದಮ್ಮ – ಚಿಕ್ಕಬಳ್ಳಾಪುರ

  • ಡಾ. ಎಚ್.ಎಲ್. ಪುಷ್ಪ – ತುಮಕೂರು

  • ರಹಮತ್ ತರೀಕೆರೆ – ಚಿಕ್ಕಮಗಳೂರು

  • ಹ.ಮ. ಪೂಜಾರ – ವಿಜಯಪುರ

ಚಲನಚಿತ್ರ / ಕಿರುತೆರೆ

  • ಪ್ರಕಾಶ್ ರಾಜ್ – ದಕ್ಷಿಣ ಕನ್ನಡ

  • ವಿಜಯಲಕ್ಷ್ಮೀ ಸಿಂಗ್ – ಕೊಡಗು

ಆಡಳಿತ ಕ್ಷೇತ್ರ

  • ಹೆಚ್. ಸಿದ್ದಯ್ಯ, ಭಾ.ಆ.ಸೇ (ನಿ) – ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ ಕ್ಷೇತ್ರ

  • ಆಲಮ್ಮ ಮಾರಣ್ಣ – ತುಮಕೂರು

  • ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

  • ಮತಿ. ಸೂಲಗಿತ್ತಿ ಈರಮ್ಮ – ವಿಜಯನಗರ

  • ಫಕ್ಕೀರಿ – ಬೆಂಗಳೂರು ಗ್ರಾಮಾಂತರ

  • ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ

  • ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ

  • ಕೋಣಂದೂರು ಲಿಂಗಪ್ಪ – ಶಿವಮೊಗ್ಗ

  • ಉಮೇಶ ಪಂಬದ – ದಕ್ಷಿಣ ಕನ್ನಡ

  • ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ

  • ಕೆ. ದಿನೇಶ್ – ಬೆಂಗಳೂರು

  • ಶಾಂತರಾಜು – ತುಮಕೂರು

  • ಜಾಫರ್ ಮೊಹಿಯುದ್ದೀನ್ – ರಾಯಚೂರು

  • ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ

  • ಬಾಯಿ – ಬಳ್ಳಾರಿ

  • ಪುಂಡಲೀಕ ಶಾಸ್ತ್ರೀ (ಬುಡಬುಡಕೆ) – ಬೆಳಗಾವಿ

ಹೊರನಾಡು / ಹೊರದೇಶ

  • ಜಕರಿಯ ಬಜಪೆ – ಸೌದಿ ಅರೇಬಿಯಾ

  • ಪಿ.ವಿ. ಶೆಟ್ಟಿ – ಮುಂಬೈ

ಪರಿಸರ ಕ್ಷೇತ್ರ

  • ರಾಮೇಗೌಡ – ಚಾಮರಾಜನಗರ

  • ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

ಕೃಷಿ ಕ್ಷೇತ್ರ

  • ಡಾ. ಎಸ್.ವಿ. ಹಿತ್ತಲಮನಿ – ಹಾವೇರಿ

  • ಎಂ.ಸಿ. ರಂಗಸ್ವಾಮಿ – ಹಾಸನ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow