2ನೇ ಬಾರಿಗೆ ಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್‌ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ!

ಅಕ್ಟೋಬರ್ 16, 2024 - 16:06
 0  10
2ನೇ ಬಾರಿಗೆ ಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್‌ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ!

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆಶ್ರೀನಗರದ ಶೇರ್--ಕಾಶ್ಮೀರ್ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ (ಎಸ್ಕೆಐಸಿಸಿ) ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಒಮರ್ ಮತ್ತು ಅವರ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಇಂದು ಪ್ರಮಾಣ ವಚನ ಸ್ವೀಕರಿಸುವ ಮುನ್ನ ಒಮರ್ ಅಬ್ದುಲ್ಲಾ ಅವರು ಶ್ರೀನಗರದಲ್ಲಿರುವ ಶೇಕ್ ಮೊಹಮ್ಮದ್ ಅಬ್ದುಲ್ಲಾ ಅವರ ಮಜರ್--ಅನ್ವರ್ನಲ್ಲಿ ನಮನ ಸಲ್ಲಿಸಿದರು.

ಪಿಟಿಐ ಪ್ರಕಾರ, INDIA ಬ್ಲಾಕ್ ಘಟಕಗಳಿಗೆ ಆಹ್ವಾನಗಳನ್ನು ನೀಡಲಾಯಿತು. ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ ಶ್ರೀನಗರಕ್ಕೆ ಆಗಮಿಸಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow