3 ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಜಮಾ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಎರಡು ಮೂರು ತಿಂಗಳಿನಿಂದ ಬಂದಿಲ್ಲ ಎಂದು ಗೃಹಕ್ಷ್ಮಿ ಫಲಾನುಭವಿ ಮಹಿಳೆಯರೇ ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಇದಕ್ಕೆ ಉತ್ತರ ಸಿಕ್ಕಿದ್ದು, ಗೃಹಲಕ್ಷ್ಮಿ ಹಣವನ್ನು ಈ ತಿಂಗಳು ಅಂದ್ರೆ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






