3 ದಶಕಗಳ ಹೋರಾಟಕ್ಕೆ ಸಿಕ್ತು ಫಲ: ಒಳ ಮೀಸಲಾತಿ ಜಾರಿ - ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ನಿನ್ನೆ ಅಸ್ತು ಎಂದಿತ್ತು. ಇದೀಗ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿರುವ ಜಾತಿವಾರು ವರ್ಗೀಕರಣವನ್ನು ಜಾರಿಗೆ ತರಲಾಗಿದೆ. ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುತ್ತಿರುವುದಾಗಿ ಸಿಎಂ ಸದನದಲ್ಲಿ ಘೋಷಿಸಿದ್ದಾರೆ.
ಹೌದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರದಿ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಒಳ ಮೀಸಲಾತಿ ಕುರಿತು ಸರ್ಕಾರ ಕೈಗೊಂಡ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಮಾತಾಡಿದ್ರು. ಒಳ ಮೀಸಲು ಜಾರಿಗೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನ್ನ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದ್ರು. ಏನಾದರೂ ಬದಲಾವಣೆ ಬೇಕೆಂದರೆ ಮುಂದಿನ ಹಂತದಲ್ಲಿ ಅದರ ಬಗ್ಗೆ ತೀರ್ಮಾನ ಮಾಡುವುದಾಗಿಯೂ ಸದನಕ್ಕೆ ತಿಳಿಸಿದ್ರು.
18 ಜಾತಿಗಳಿರುವ ಎಡಗೈ ಸಮುದಾಯಕ್ಕೆ 6% ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ 6% ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ 5% ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ.
ಅಲೆಮಾರಿ, ಆದಿ ಕರ್ನಾಟಕ, ಆದಿ ದ್ರಾವಿಡ ಪಂಗಡಗಳ ಮೀಸಲಾತಿ ನಮಗೆ ಕೊಡಿ ಎಂದು ಬಲಗೈ, ಲಂಬಾಣಿ ಭೋವಿ ಸಮಾಜ ಒತ್ತಾಯಿಸಿದ್ದವು. ಅಂತಿಮವಾಗಿ ಐದು ಪ್ರವರ್ಗಗಳ ಬದಲು ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಲಾಗಿದೆ. ಈ ಪ್ರಕಾರ ಎಡಗೈ, ಬಲಗೈ ಸಮುದಾಯಗಳಿಗೆ ತಲಾ 6% ಮೀಸಲಾತಿ ಹಂಚಿಕೆ ಮಾಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?